Hindusthan Samachar
Banner 2 सोमवार, मई 21, 2018 | समय 04:36 Hrs(IST) Sonali Sonali Sonali Singh Bisht

ಸುಪ್ರೀಂ ಕೋರ್ಟ್ ಆದೇಶವನ್ನು ನಾವು ಸ್ವಾಗತಿಸುತ್ತೇವೆ - ಶೋಭಾ ಕರಂದ್ಲಾಜೆ

By HindusthanSamachar | Publish Date: May 18 2018 2:25PM
ಬೆಂಗಳೂರು, ಮೇ.18 (ಹಿ ಸ) - ಸುಪ್ರೀಂ ಕೋರ್ಟ್ ನೀಡಿರುವ ವಿಶ್ವಾಸಮತ ಸಾಬೀತುಪಡಿಸುವ ಆದೇಶವನ್ನು ನಾವು (ಬಿಜೆಪಿಯವರು) ಸ್ವಾಗತಿಸುತ್ತೇವೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಪ್ರಮಾಣ ವಚನ ಸಮಾರಂಭಕ್ಕೆ ಅವಕಾಶ ನೀಡಕೂಡದು ಎಂದು ಕೋರಿ ಕಾಂಗ್ರೆಸ್–ಜೆಡಿಎಸ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಇಂದು ಬೆಳಿಗ್ಗೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ನಾಳೆ ಸಂಜೆ 4ಕ್ಕೆ ಬಹುಮತ ಸಾಬೀತುಪಡಿಸುವಂತೆ ಆದೇಶ ನೀಡಿದೆ. ಸುಪ್ರೀಂ ಕೋರ್ಟ್ ಆದೇಶ ಪ್ರಕಟಗೊಂಡ ಬಳಿಕ ಸುದ್ದಿಗಾರ ಜತೆ ಮಾತನಾಡಿದ ಶೋಭಾ ಕರಂದ್ಲಾಜೆ ಅವರು, ಸುಪ್ರೀಂ ಕೋರ್ಟ್ ನ ಆದೇಶವನ್ನು ನಾವು ಪಾಲಿಸುತ್ತೇವೆ. ನಾಳೆಯೇ ವಿಶ್ವಾಸ ಮತ ಸಾಬೀತುಪಡಿಸುತ್ತೇವೆ ಎಂದು ತಿಳಿಸಿದರು. ಹಿಂದುಸ್ತಾನ ಸಮಾಚಾರ/ಆರ್.ಎಸ್/ಯ.ಮ
image