Hindusthan Samachar
Banner 2 रविवार, मई 27, 2018 | समय 10:57 Hrs(IST) Sonali Sonali Sonali Singh Bisht

ನಾಳೆಯೇ ಬಹುಮತ ಸಾಬೀತುಪಡಿಸುತ್ತೇವೆ – ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ

By HindusthanSamachar | Publish Date: May 18 2018 2:24PM
ಬೆಂಗಳೂರು, ಮೇ.18 (ಹಿ ಸ) - ಸುಪ್ರೀಂ ಕೋರ್ಟ್ ನ ಆದೇಶದಂತೆ ನಾಳೆ ಬಹುಮತ ಸಾಬೀತುಪಡಿಸುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಪ್ರಮಾಣ ವಚನ ಸಮಾರಂಭಕ್ಕೆ ಅವಕಾಶ ನೀಡಕೂಡದು ಎಂದು ಕೋರಿ ಕಾಂಗ್ರೆಸ್–ಜೆಡಿಎಸ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಇಂದು ಬೆಳಿಗ್ಗೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ನಾಳೆ ಸಂಜೆ 4ಕ್ಕೆ ಬಹುಮತ ಸಾಬೀತುಪಡಿಸುವಂತೆ ಆದೇಶ ನೀಡಿತು. ಸುಪ್ರೀಂ ಕೋರ್ಟ್ ಆದೇಶ ಹೊರ ಬಿದ್ದ ಕೆಲ ಸಮಯದಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್. ಯಡಿಯೂರಪ್ಪ ಅವರು, ಸುಪ್ರೀಂ ಕೋರ್ಟ್ ನ ಆದೇಶವನ್ನು ಪಾಲನೆ ಮಾಡುತ್ತೇವೆ. ನಾಳೆಯೇ ವಿಶ್ವಾಸ ಮತ ಸಾಬೀತುಪಡಿಸುತ್ತೇವೆ ಎಂದು ತಿಳಿಸಿದರು. ಈ ಸಂಬಂಧ ನಾಳೆ ವಿಧಾನಸಭೆ ಅಧಿವೇಶನ ಕರೆಯುವ ಬಗ್ಗೆ ಮುಖ್ಯ ಕಾರ್ಯದರ್ಶಿ ಜತೆ ಚರ್ಚಿಸುತ್ತೇನೆ. 100 ಕ್ಕೆ 100 ರಷ್ಟು ಬಹುಮತ ಸಾಬೀತುಪಡಿಸುತ್ತೇವೆ ಎಂದು ಯಡಿಯೂರಪ್ಪ ಅವರು ವಿಶ್ವಾಸ ವ್ಯಕ್ತಪಡಿಸಿದರು. ಆದರೆ, ಹೇಗೆ ಬಹುಮತ ತೋರಿಸುತ್ತೀರಿ? ಯಾರೆಲ್ಲಾ ನಿಮ್ಮ ಜತೆಗಿದ್ದಾರೆ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಯಾವುದೇ ಪ್ರತಿಕ್ರಿಯೆ ನೀಡದೆ, ಕಾದು... For More details Please login to Hindusthan Samachar
image